• Feb 03, 2026
  • NPN Log
    Confident Group Chairman CJ Roy Suicide: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಅವರು ಬೆಂಗಳೂರಿನಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಶೂಟ್​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ದೌಡಾಯಿಸಿರುವ ಅಶೋಕ​​ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಅಸಲಿ ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ. ಬೆಂಗಳೂರು, ಜನವರಿ 30: ರಿಯಲ್​ ಎಸ್ಟೇಟ್​ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್​​ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು? ಸಿ.ಜೆ.ರಾಯ್​​ ಅವರು ಕಾನ್ಫಿಡೆಂಟ್ ಗ್ರೂಪ್​ ಎಂಬ ರಿಯಲ್​ ಎಸ್ಟೇಟ್​ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿ ಮೇಲೆ IT ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಕೂಡ ದಾಳಿ ಮಾಡಿದ್ದರು. ಮಧ್ಯಾಹ್ನ ಕಚೇರಿಗೆ ಬಂದಿದ್ದ ಉದ್ಯಮಿ ಸಿ.ಜೆ.ರಾಯ್, ಒಂದು ಗಂಟೆ ಐಟಿ ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳಿಗೆ ಕೆಲ ದಾಖಲೆ ಸಹ ಕೊಟ್ಟಿದ್ದಾರೆ. ಮತ್ತಷ್ಟು ದಾಖಲೆ ತರಲು ರೂಂ​ಗೆ ಹೋಗಿದ್ದು, ಈ ವೇಳೆ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಿ.ಜೆ.ರಾಯ್ ಕೊನೆಯುಸಿರೆಳೆದಿದ್ದಾರೆ. ಖುದ್ದು ಡಿಸಿಪಿ ಅಕ್ಷಯ್​​ ಅವರು ತನಿಖೆ ನಡೆಸಿದ್ದು, ಈಗಾಗಲೇ ಫೈರ್ ಮಾಡಿಕೊಂಡ ಪಿಸ್ತೂಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಚೇರಿ ಕೊಠಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಯಾವುದಾದರೂ ಡೆತ್ ನೋಟ್ ಇದೆಯಾ ಅಥವಾ ಮೊಬೈಲ್​ನಲ್ಲಿ ಏನಾದ್ರೂ ಇದೆಯಾ ಅಥವಾ ಯಾರಿಗಾದ್ರೂ ಮೆಸೇಜ್ ಮಾಡಿದ್ದರಾ ಎಂದು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ ಎಂಬ ಸಾಮ್ರಾಜ್ಯ ಕಟ್ಟಿದ್ದೇ ರೋಚಕ ಕೇರಳ ಮೂಲದ ಸಾಮಾನ್ಯ ವ್ಯಕ್ತಿಯಾಗಿದ್ದ ಸಿಜೆ ರಾಯ್, 1997ರಲ್ಲಿ ಹೆಚ್​ಪಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ತದನಂತರ ಕಾನ್ಫಿಡೆಂಟ್ ಗ್ರೂಪ್ ಎಂಬ ಸಾಮ್ರಾಜ್ಯ ಕಟ್ಟಿದ್ದೇ ರೋಚಕ. 30,40 ಸೈಟ್​ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಶುರು ಮಾಡಿ, ಸದ್ಯ 1 ಸಾವಿರ ಎಕರೆ ಭೂಮಿ ಹೊಂದಿದ್ದರು. ಇನ್ನು ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಹಿನ್ನೆಲೆ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಿಂದ ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಇಂದು ಬೆಳಗ್ಗೆ ದಾಳಿ ಮಾಡಿದ್ದ ಆದಾಯ ತೆರಿಗೆ ಅಧಿಕಾರಿಗಳು 2 ಕಾರುಗಳಲ್ಲಿ 10 ಜನರು ವಾಪಸ್ ಆಗಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion