• Sep 11, 2026
  • NPN Log
    ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ ನಡೆಯುತ್ತಿರುವ ಎಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಅವರು ರಾಜ್ಯದಲ್ಲಿ ಬರ ಘೋಷಣೆ, ಕೆಪಿಎಎಸ್ ಅಕ್ರಮ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಕೊಪ್ಪಳದಲ್ಲಿ ಬರ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿವೆ. ಆ ಮಾರ್ಗಸೂಚಿಗಳ ಪ್ರಕಾರ ಅರ್ಹವಾಗಿರುವ ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್ ಕ್ಷೇತ್ರ ಎಂಬ ಯಾವುದೇ ತಾರತಮ್ಯ ಮಾಡಿಲ್ಲ. ಎರಡನೇ ಸುತ್ತಿನಲ್ಲಿ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ ಎಂದು ಹೇಳಿದರು. ಬಿಜೆಪಿ ನಾಯಕರ ಜೈಲು ಇತಿಹಾಸ ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ ಜನಾರ್ದನರೆಡ್ಡಿ ಯಾಕೆ ಪಾದಯಾತ್ರೆ ಮಾಡುತ್ತಿದ್ದಾರೆ? ಎಂಬುದನ್ನು ಉತ್ತರಿಸಲಿ ಸವಾಲೆಸೆದರು. ಬಿಜೆಪಿಯವರು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಪಾದಯಾತ್ರೆ ಮಾಡಲಿ. ರಾಜ್ಯಾದ್ಯಂತ ಬರ ಆವರಿಸಿದೆ. ಕೇಂದ್ರದ ವಿರುದ್ಧ ಬರ ಪರಿಹಾರ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ಮಾಡಲಿ ಎಂದು ಟೀಕಿಸಿದರು. ಸರ್ಕಾರಿ ಶಾಲೆಗಳಿಗೆ ಸಿಗಲಿದೆ ಬೂಸ್ಟ್ ಬಿಜೆಪಿ ನಾಯಕರುಗಳಿಗೆ ಸದನದಲ್ಲಿ ಜನರ ಸಮಸ್ಯೆಗಳ ಚರ್ಚೆ ಮಾಡಲು ಸಮಯವಿಲ್ಲ. ರೈತರು ಹಾಗೂ ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಇವರಿಗೆ ಬೇಕಾಗಿರುವುದು ಕೇವಲ ರಾಜಕಾರಣ. ನೂರಕ್ಕೆ ನೂರು ಇದು ಬಿಜೆಪಿಯವರ ಪಾದಯಾತ್ರೆಯಲ್ಲ. ಇದು ಪಶ್ಚಾತ್ತಾಪದ ಯಾತ್ರೆ. ಎಲ್ಲಾ ಭ್ರಷ್ಟಾಚಾರಿಗಳು, ರಾಜ್ಯದ ವಿರುದ್ಧ ಕೆಲಸ ಮಾಡಿದವರು ಸೇರಿಕೊಂಡು ಈ ಪಶ್ಚಾತ್ತಾಪದ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಕಿಡಿ ಕಾರಿದರು. ಕೆಪಿಎಸ್‌ಸಿ‌ ಅಧ್ಯಕ್ಷರನ್ನು ನೇಮಿಸಿದ್ದು ಯಾರು? ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪಾದಯಾತ್ರೆಯ ಬಗ್ಗೆ ವಿರೋಧವಾಗಿ ಮಾತನಾಡುತ್ತಾರೆ. ಎಚ್ ಡಿ. ಕುಮಾರಸ್ವಾಮಿ ಅವರೂ ಈಗ ಪಾದಯಾತ್ರೆ ಯಾಕೆ? ಎಂದು ಪ್ರಶ್ನಿಸುತ್ತಿದ್ದಾರೆ. ಹೀಗಿದ್ದರೂ ಪಾದಯಾತ್ರೆ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ಭೋವಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡಿದ್ದು ಯಾರು? ಅಕ್ರಮ ನೇಮಕಾತಿ ಆರೋಪ ಎದುರಿಸುತ್ತಿರುವವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಮಾಡಿದ್ದು ಯಾರು? ಈ ಪ್ರಕರಣದ ಆರೋಪಿಗಳು ಯಾರು? ಬಿಜೆಪಿಯನ್ನು ಜನರು ಮರೆತುಬಿಟ್ಟಿದ್ದರು. ಅದಕ್ಕಾಗಿ ಮತ್ತೆ ಜನರ ಮುಂದೆ ಕಾಣಿಸಿಕೊಳ್ಳಲು ಪಾದಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಯವರಿಗೆ ಮಾನ-ಮರಿಯಾದೆ ಇದ್ದರೆ ಪಿಎಸ್‌ಐ ಹಗರಣ ಯಾರ ಕಾಲದಲ್ಲಿ ನಡೆಯಿತು ಎಂಬುದನ್ನು ಮೊದಲು ಹೇಳಲಿ ಎಂದರು. ಎಸ್‌ಟಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಹೆಚ್ಚಿಸಿದವರು ನಾವು. ಆ ಹಣವನ್ನು ಎಸ್‌ಸಿ-ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ನೀಡಿದರೆ ತಪ್ಪೇನು? ಈ ಯೋಜನೆಯನ್ನು ರೂಪಿಸಿ ಜಾರಿಗೆ ತಂದವರು ನಾವು. ಇದರಲ್ಲಿ ನಿಮ್ಮ ಪಾಲು ಏನು?, ತಾಕತ್ತು ಇದ್ದರೆ ಕೇಂದ್ರ ಸರ್ಕಾರಕ್ಕೆ ಹೇಳಿ, ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಲಿ ಎಂದು ಒತ್ತಾಯಿಸಿದರು. ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್‌ ಸ್ಫೋಟಕ ಆರೋಪ ಕೊಪ್ಪಳ ಪ್ರಾಧಿಕಾರ ಹಗರಣದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಆರೋಪಿಗಳನ್ನು ಬಂಧಿಸಿರುವ ಮಾಹಿತಿ ಇದೆ. ಈ ಕುರಿತು ಸಭೆ ಕರೆದು ಚರ್ಚೆ ಮಾಡುತ್ತೇನೆ. ಸೈಟ್ ಹಂಚಿಕೆ ವಿಚಾರದಲ್ಲಿ ಎಲ್ಲೆಲ್ಲಿ ಅಕ್ರಮ ನಡೆದಿದೆ ಎಂಬುದರ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುತ್ತೇನೆ. ಅಗತ್ಯವಿದ್ದರೆ ತನಿಖೆಗೆ ಅಧಿಕೃತವಾಗಿ ಸೂಚನೆ ನೀಡುತ್ತೇನೆ ಎಂದು ಹೇಳಿದರು. ರಾಯರೆಡ್ಡಿ ಹೇಳಿಕೆಗೆ ಸಚಿವರ ಸಮರ್ಥನೆ ಬಸವರಾಜ ರಾಯರೆಡ್ಡಿ ಅವರು ಮುಸ್ಲಿಂ ಸಮಾಜದ ಕಾರ್ಯಕ್ರಮಕ್ಕೆ ಹೋದಾಗ ಸಹಜವಾಗಿಯೇ ಆ ಸಮಾಜದ ಬಗ್ಗೆ ಮಾತನಾಡುವುದು ಸಾಮಾನ್ಯ. ಅದನ್ನು ದೊಡ್ಡ ವಿವಾದವನ್ನಾಗಿ ಮಾಡುವುದು ಸರಿಯಲ್ಲ. ಅವರು ಮುಸ್ಲಿಂ ಹಾಗೂ ಹಿಂದೂ ಧರ್ಮ ಸೇರಿ ಎಲ್ಲ ಧರ್ಮವನ್ನೂ ಪ್ರೀತಿಸುತ್ತಾರೆ. ನಾನು ಸಹ ಎಲ್ಲ ಧರ್ಮಗಳನ್ನೂ ಪ್ರೀತಿಸುತ್ತೇನೆ ಎಂದು ಸಮಥಿಸಿಕೊಂಡರು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion