ಕರ್ನಾಟಕದಲ್ಲಿ ಇಂದು ಭಾರಿ ಮಳೆ ಅಲರ್ಟ್
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರಮುಖವಾಗಿ ಸಂಜೆಯ ನಂತರ ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ, ಕರಾವಳಿ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು (ಆಗಸ್ಟ್ 29) ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ದಿನವಿಡೀ ಮೋಡಕವಿದ ವಾತಾವರಣ ಇರಲಿದ್ದು, ಗುಡುಗು ಮತ್ತು ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಸಮುದ್ರ ತೀರದಲ್ಲಿ ಬಿರುಗಾಳಿಯ ಅಬ್ಬರ ಇರಲಿದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಸಾದ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಅದೇ ರೀತಿ, ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿಯೂ ಮಳೆಯ ಆರ್ಭಟ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದೆ. Also Read Imd Weather Forecast: ಸೆಪ್ಟೆಂಬರ್ 3ರ ವರೆಗೆ ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ! ಬೆಂಗಳೂರು ಮಳೆ ವರದಿ ರಾಜಧಾನಿ ಬೆಂಗಳೂರಿನ ಹವಾಮಾನದಲ್ಲಿ ಇಂದು ಮಿಶ್ರ ವಾತಾವರಣ ಇರಲಿದೆ. ಹವಾಮಾನ ವರದಿಗಳ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಬೆಳಗಿನ ಜಾವ ಮತ್ತು ಮಧ್ಯಾಹ್ನ ಭಾಗಶಃ ಬಿಸಿಲು ಇರಲಿದ್ದರೂ, ಸಂಜೆ ಅಥವಾ ರಾತ್ರಿಯ ವೇಳೆ ಮೋಡಗಳು ಕವಿದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ರಭಸವಾದ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ. ಆಗಸ್ಟ್ 29 ರಿಂದ ಆರಂಭವಾಗಿ ಮುಂದಿನ ಒಂದು ವಾರದ ಕಾಲ ಅಂದರೆ ಸೆಪ್ಟೆಂಬರ್ ಮೊದಲ ವಾರದವರೆಗೆ ರಾಜ್ಯಾದ್ಯಂತ ಚದುರಿದಂತೆ ಮಳೆಯಾಗುವ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Recommended For You Karnataka Weather: ಬೆಂಗಳೂರಿಗರೇ ಮನೆಯಿಂದ ಆಚೆ ಹೋಗ್ತಿದ್ದೀರಾ? ಹಾಗಾದ್ರೆ ಇಂದಿನ ಹವಮಾನದ ಬಗ್ಗೆ ತಿಳಿದಿರಲಿ ಒಳನಾಡು ಜಿಲ್ಲೆಗಳಲ್ಲಿ ಮಧ್ಯಾಹ್ನದವರೆಗೆ ಕೊಂಚ ಬಿಸಿಲು ಇದ್ದರೂ, ಸಂಜೆಯ ನಂತರ ಮೋಡದ ವಾತಾವರಣ ನಿರ್ಮಾಣವಾಗಿ ಮಳೆಯಾಗಲಿದೆ. ಗುಡುಗು ಮತ್ತು ಸಿಡಿಲಿನ ಅಬ್ಬರ ಹೆಚ್ಚಿರುವ ಕಾರಣ ಸಾರ್ವಜನಿಕರು ಬಯಲು ಪ್ರದೇಶಗಳಲ್ಲಿ, ವಿದ್ಯುತ್ ಕಂಬಗಳ ಬಳಿ ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಹವಾಮಾನದ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ. ಪ್ರತಿದಿನ ಪ್ರಯಾಣಿಸುವವರು ಮತ್ತು ವಾಹನ ಸವಾರರು ಸಂಜೆಯ ವೇಳೆ ಮಳೆಯಿಂದಾಗುವ ಟ್ರಾಫಿಕ್ ಸಮಸ್ಯೆಗಳು ಮತ್ತು ರಸ್ತೆ ಗುಂಡಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.














Comments