• Sep 11, 2026
  • NPN Log
    ಢಾಕಾ, ಆಗಸ್ಟ್ 23: ಬಾಂಗ್ಲಾದೇಶದ ರಂಗ್‌ಪುರ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಮೃತರಲ್ಲಿ ನಿವೃತ್ತ ಹಿಂದೂ ಶಾಲಾ ಶಿಕ್ಷಕ, ಅವರ ಪತ್ನಿ, ಯುವತಿ ಹಾಗೂ ಅಪ್ರಾಪ್ತ ಮಗ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಸ್ಪಾರಾ ಪ್ರದೇಶದಲ್ಲಿರುವ ಮನೆಯ ಬಾಗಿಲು ಒಳಗಿನಿಂದ ಬೀಗ ಹಾಕಲಾಗಿತ್ತು. ಶನಿವಾರ ರಾತ್ರಿ ಪೊಲೀಸರು ಬಾಗಿಲು ಮುರಿದು ಮನೆಯೊಳಗೆ ಪ್ರವೇಶಿಸಿ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ. ಘಟನೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion