ಬೆಂಗಳೂರು ಗಣೇಶೋತ್ಸವಕ್ಕೆ ಭದ್ರತೆ ಬಿಗಿ: ನಿಯಮ ಪಾಲನೆಗೆ ಸೂಚನೆ
ರಾಜಧಾನಿ ಬೆಂಗಳೂರು ಗಣೇಶೋತ್ಸವ ಸ್ವಾಗತಿಸಲು ಸಜ್ಜಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಗಣೇಶೋತ್ವಸ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪಿಒಪಿ ಗಣೇಶ ನಿರ್ಬಂಧ, ಏಕಗವಾಕ್ಷಿ ವ್ಯವಸ್ಥೆ ಜಾರಿ, ಮೆರವಣಿಗೆಯಲ್ಲಿ ಮದ್ಯಪಾನ ನಿಷೇಧ ಸೇರಿ ಕೆಲವು ಕ್ರಮಗಳನ್ನು ಕೈಗೊಳ್ಳಲಿದೆ. ಜೊತೆಗೆ ಮಾರ್ಗಸೂಚಿ ಅನುಸರಿಸುವಂತೆ ಖಡಕ್ ಆಗಿ ಉತ್ಸವ ಮಂಡಳಿಗಳಿಗೆ ಸೂಚನೆ ನೀಡಿದೆ. ಇಂದು ಮಂಗಳವಾರ ಗೌರಿ ಗಣೇಶೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಬಿಎ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆಯ ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ದಲ್ಲಿ ಆಯೋಜಿಸಿದ್ದ 'ಶಾಂತಿ ಸೌಹಾರ್ದತೆ' ಸಭೆ ನಡೆಯಿತು. ಈ ವೇಳೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಹತ್ವದ ಮಾಹಿತಿ ನೀಡಿದರು. ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು. ಪಿಒಪಿಯಿಂದ ತಯಾರಿಸಲಾದ ಗಣೇಶ ಮೂರ್ತಿಗಳ ಬಳಕೆಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಸಂಪೂರ್ಣವಾಗಿ ನಿಷೇಧಿಸಿದೆ. ಆದ್ದರಿಂದ ಈ ಬಾರಿ ಗೌರಿ ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು ಎಂದು ಮಹೇಶ್ವರ್ ರಾವ್ ಅವರು ಮನವಿ ಮಾಡಿದರು. Also Read Bengaluru Garbage Rules: ಕಸ ನಿರ್ವಹಣೆಗೆ ಹೊಸ ರೂಲ್ಸ್: ಮನೆ ಹೊರಗೆ ವಿಂಗಡಿಸಿ ಕಸ ಸಂಗ್ರಹಿಸಿ: ಸಚಿವ ಸುಸೂತ್ರವಾಗಿ ನಡೆಯಲು ಎಲ್ಲ ಸಿದ್ಧತೆ ಗಣೇಶೋತ್ಸವವನ್ನು ನಾವೆಲ್ಲರೂ ಒಗ್ಗೂಡಿ ವಿಶೇಷವಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ಗಣೇಶೋತ್ಸವವು ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೊಲೀಸ್ ಠಾಣಾವಾರು ಪಾಲಿಕೆ, ಪೊಲೀಸ್ ಹಾಗೂ ಬೆಸ್ಕಾಂ ಅಧಿಕಾರಿಗಳು ಸಭೆ ನಡೆಸಿ, ಗಣೇಶೋತ್ಸವಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ದುರಸ್ತಿಯಲ್ಲಿರುವ ಕಡೆಗಳಲ್ಲಿ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. ಕೆರೆಗಳ ಬಳಿಯಿರುವ ಕಲ್ಯಾಣಿ/ವಿಸರ್ಜನಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು. ಯಾವುದೇ ಸಮಸ್ಯೆ ಕಂಡುಬಂದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಗಣೇಶೋತ್ಸವದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಿ, ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಉತ್ತಮ ರೀತಿಯಲ್ಲಿ ಹಾಗೂ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸೋಣ ಎಂದರು. ತಡವಾಗಿ ಬಂದರೂ ವಿಸರ್ಜನೆಗೆ ಅವಕಾಶ ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಬೇಗ ಮುಚ್ಚಲಾಗುತ್ತದೆ ಎಂಬ ನಾಗರಿಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ತಡವಾಗಿ ಬಂದರೂ ಅವಕಾಶ ಕಲ್ಪಿಸಲಾಗುವುದು. ಅದಕ್ಕಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಕೆರೆಗಳ ಬಳಿಯಿರುವ ಕಲ್ಯಾಣಿಗಳ ಹೊರತಾಗಿ ಬೇರೆ ಸ್ಥಳಗಳಲ್ಲಿ ವಿಸರ್ಜನಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಬಂದಲ್ಲಿ, ಅದಕ್ಕೂ ಅಗತ್ಯ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು. Recommended For You Karnataka Govt Jobs: ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಕನ್ನಡಕ್ಕೆ 50, ಇಂಗ್ಲಿಷ್‌ಗೆ 20 ಅಂಕ! ಬಿಳಿಮಲೆ ಒತ್ತಾಯ Bengaluru Ganesh Chaturthi 2026: ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಉಪವಿಭಾಗ ಕಚೇರಿಗಳಲ್ಲಿ ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುವುದು. ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಅಲ್ಲಿ ನಿಯೋಜಿಸಲಾಗುವ ನೋಡಲ್ ಅಧಿಕಾರಿಗಳ ವಿವರಗಳನ್ನು ಶೀಘ್ರದಲ್ಲೇ ಪಾಲಿಕೆಯ ವೆಬ್‌ಸೈಟ್ ಮೂಲಕ ಪ್ರಕಟಿಸಲಾಗುವುದು. ಅದರಂತೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಉದ್ದೇಶಿಸಿರುವವರು ಏಕಗವಾಕ್ಷಿ ಕೇಂದ್ರಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅಗತ್ಯ ಅನುಮತಿ ಪಡೆಯಯಬೇಕು ಎಂದು ಹೇಳಿದರು. ಇಲಾಖೆಗಳ ನಡುವೆ ಸಮನ್ವಯ: ಪೊಲೀಸ್ ಆಯುಕ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಮಾತನಾಡಿ, ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು. ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳು ಹಾಗೂ ವ್ಯವಸ್ಥೆಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗುವುದು. ಸಾರ್ವಜನಿಕರು ಯಾವುದೇ ರೀತಿಯ ತೊಂದರೆ ಅನುಭವಿಸದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು. ಸರ್ಕಾರದ ನಿರ್ದೇಶನ ಪಾಲನೆ ಕಡ್ಡಾಯ ಗಣೇಶೋತ್ಸವದ ಮೆರವಣಿಗೆಯನ್ನು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಾರಂಭಿಸುವುದು ಅತ್ಯಂತ ಮುಖ್ಯವಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಸಂಚಾರ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಮೆರವಣಿಗೆಯ ಮಾರ್ಗ ಹಾಗೂ ಸಮಯದ ಕುರಿತು ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು. ಸಂಘಟಕರು ಹಾಗೂ ಸಾರ್ವಜನಿಕರು ಈ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು. ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘಿಸುವವರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. You May Also Like NHAI Toll Hike: ಇಂದಿನಿಂದ ಟೋಲ್ ದರ ಹೆಚ್ಚಳ! ಬೆಂಗಳೂರು-ಹಾಸನ ವಾಹನ ಸವಾರರೇ ಗಮನಿಸಿ ಪಿಓಪಿ ಗಣೇಶ ಬಿಟ್ಟು ಬಿಡಿ, ನಿಯಮ ಪಾಲಿಸಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಬಳಕೆಯನ್ನು ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಪಿಓಪಿಯಿಂದ ತಯಾರಿಸಲಾದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ. ಈ ನಿಯಮವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಮೆರವಣಿಗೆಯಲ್ಲಿ ಮದ್ಯಪಾನ ಮಾಡುವಂತಿಲ್ಲ! ಇನ್ನೂ ಗಣೇಶೋತ್ಸವದ ಮೆರವಣಿಗೆಯಲ್ಲಿ ಮದ್ಯಪಾನ ಮಾಡಿ ಭಾಗವಹಿಸುವವರ ಬಗ್ಗೆ ಸ್ವಯಂಸೇವಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸ್ವಯಂಸೇವಕರು ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯನಿರ್ವಹಿಸಿದರೆ ಗಣೇಶೋತ್ಸವ ಸುಸೂತ್ರವಾಗಿ ನಡೆಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಮೆರವಣಿಗೆಯ ಮಾರ್ಗದಲ್ಲಿ ಅಗತ್ಯವಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವುದು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಕಲ್ಪಿಸಲಾಗುವುದು. ಈಗಾಗಲೇ ಇರುವ ಸಮಸ್ಯೆಗಳನ್ನು ಗುರುತಿಸಿ ಸೂಕ್ತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಗಣೇಶೋತ್ಸವದ ಸಂದರ್ಭದಲ್ಲಿ ಯಾರೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ತೊಡಗಬಾರದು. ಶಾಂತಿಯುತವಾಗ














Comments