ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಆರಂಭ: ದಾಖಲೆಗಳೇನು
ಪಡಿತರ ಚೀಟಿಯು ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ಯಾವುದೇ ಒಂದು ತಪ್ಪಿದರೂ ಸಹ ಪರಿಗಣಿಸಲಾಗುವುದಿಲ್ಲ. ಈ ಸಲುವಾಗಿ ಇದೀಗ ಮತ್ತೆ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಕಾಗಿದೆ. ಹಾಗಾದ್ರೆ ಬೇಕಾಗುವ ದಾಖಲೆಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಪಡಿತರ ಚೀಟಿ ತಿದ್ದುಪಡಿಗಷ್ಟೇ ಅವಕಾಶ ಕಲ್ಪಿಸಲಾಗಿದೆ, ಹೊಸ ರೇಷನ್ ಕಾರ್ಡ್ಗೆ ಇನ್ನೂ ಬಿಟ್ಟಿಲ್ಲ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿದೆ. ಯಾವೆಲ್ಲಾ ದಾಖಲೆಗಳು ಬೇಕು ಏನೆಲ್ಲಾ ಸರಿಪಡಿಸಿಕೊಳ್ಳಬಹುದು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹದು? * ಕರ್ನಾಟಕ ಒನ್ * ಬೆಂಗಳೂರು ಒನ್ * ಗ್ರಾಮ ಒನ್ * ಸೈಬರ್ ಸೆಂಟರ್ Also Read Karnataka Government Jobs:10 ಸಾವಿರ ಹುದ್ದೆಗಳಿಗೆ 16 ಲಕ್ಷ ಅರ್ಜಿ! ವಿವಿಧ ಇಲಾಖೆಗಳ ನೇಮಕಾತಿಗೆ ಭಾರಿ ಪೈಪೋಟಿ ನೀವು ಒಂದು ವೇಳೆ ಬೆಂಗಳೂರಿನವರಾಗಿದ್ದರೆ, ಬೆಂಗಳೂರಿನಲ್ಲಿ ಬೆಂಗಳೂರು ಒನ್, ಗ್ರಾಮದವರು ಆಗಿದ್ದರೆ, ಗ್ರಾಮ ಒನ್ ಅಥವಾ ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಅಲ್ಲದೆ ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್ಸೈಟ್ಗೆ ಭೇಟಿ ನೀಡಬಹುದು. ತಿದ್ದುಪಡಿ ಪ್ರಕ್ರಿಯೆಗೆ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಏನೆಲ್ಲಾ ತಿದ್ದುಪಡಿಗೆ ಮಾಡಿಸಬಹುದು? * ಹೆಸರು ತಿದ್ದುಪಡಿ * ಹೆಸರು ಸೇರ್ಪಡೆ * ಹೆಸರು ತೆಗೆದುಹಾಕುವಿಕೆ * ವಿಳಾಸ ಬದಲಾವಣೆ * ಫೋಟೋ ಬದಲಾವಣೆ * ಕುಟುಂಬ ಮುಖ್ಯಸ್ಥರ ಬದಲಾವಣೆ * ನ್ಯಾಯಬೆಲೆ ಅಂಗಡಿ ಬದಲಾವಣೆ * ಫೋಟೋ ಬದಲಾವಣೆ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು * ಎಲ್ಲಾ ಸದಸ್ಯರ ಆಧಾರ್ ಕಾರ್ಡ್ * ಪ್ರಸ್ತುತ ಇರುವ ರೇಷನ್ ಕಾರ್ಡ್ * ಕುಟುಂಬದ ಫೋಟೋ * ವಿಳಾಸದ ದಾಖಲೆ (ವಿದ್ಯುತ್ ಬಿಲ್ ಅಥವಾ ಇತರ ಸೂಕ್ತ ದಾಖಲೆಗಳು) * ಸದಸ್ಯರ ಜಾತಿ ಮತ್ತು ಆದಾಯ (6 ವರ್ಷ ಮೆಲ್ಪಟ್ಟವರಿಗೆ) * ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ Recommended for you Teacher Recruitment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್; 19 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು * ಆಧಾರ್ ಕಾರ್ಡ್ * ಮದುವೆ ಪ್ರಮಾಣ ಪತ್ರ * ಪೋಷಕರ ಪಡಿತರ ಚೀಟಿ ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು * ಮಗುವಿನ ಜನನ ಪ್ರಮಾಣಪತ್ರ * ಪೋಷಕರ ಆಧಾರ್ ಕಾರ್ಡ್ ಅರ್ಜಿ ಸಲ್ಲಿಸುವ ವಿಧಾನಗಳು * ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ * ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ * ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ * ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ * ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ) * ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.














Comments