• Feb 03, 2026
  • NPN Log
    T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ್ಲಿ ಆಡಬೇಕಿದೆ. ಆದರೆ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಪಂದ್ಯವನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಐಸಿಸಿಗೆ ಮನವಿ ಮಾಡಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಭಾಗವಹಿಸಲಿದೆಯಾ? ಈ ಪ್ರಶ್ನೆಗೆ ಜನವರಿ 21 ರಂದು ಸ್ಪಷ್ಟ ಉತ್ತರ ಸಿಗಲಿದೆ. ಏಕೆಂದರೆ ವಿಶ್ವಕಪ್​​ನಲ್ಲಿ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಐಸಿಸಿ ಗಡುವು ನೀಡಿದೆ. ಜನವರಿ 17 ರಂದು ಢಾಕಾದಲ್ಲಿ ನಡೆದ ಸಭೆಯಲ್ಲಿ ಐಸಿಸಿ ಈ ಹೊಸ ಗಡುವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದೆ. ಟಿ20 ವಿಶ್ವಕಪ್‌ನಲ್ಲಿ ಆಡಬೇಕೆ ಬೇಡವೇ ಎಂಬುದನ್ನು ಮಾತ್ರವಲ್ಲದೆ, ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲು ಬಾಂಗ್ಲಾದೇಶಕ್ಕೆ ಜನವರಿ 21 ರವರೆಗೆ ಸಮಯಾವಕಾಶ ನೀಡಲಾಗಿದೆ. ಪಂದ್ಯಗಳ ಸ್ಥಳಾಂತರವಿಲ್ಲ: ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಭಾರತದಲ್ಲಿ ಪಂದ್ಯವಾಡಲು ಹಿಂದೇಟು ಹಾಕುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಲು ಬಿಸಿಬಿ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಿಸಲಾಗುವುದಿಲ್ಲ ಎಂದು ಐಸಿಸಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ತಿಳಿಸಿದೆ. ಹಿಂದೇಟು ಹಾಕಲು ಕಾರಣವೇನು? ಕೆಲ ದಿನಗಳ ಹಿಂದೆಯಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡಲಾಗಿತ್ತು. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್​​ನಲ್ಲಿ ಹಿಂದೂಗಳ ಮೇಲಿನ ನಡೆಯುತ್ತಿರುವ ದೌರ್ಜನ್ಯ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಹತ್ಯೆಯನ್ನು ಖಂಡಿಸಿ ಇತ್ತೀಚೆಗೆ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion