• Sep 11, 2026
  • NPN Log
    ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಭಾವುಕರಾಗಿ ಕಣ್ಣೀರಿಟ್ಟ ಅವರು, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ವಿರೋಧ ಪಕ್ಷಗಳು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು. ಬರ ಪರಿಸ್ಥಿತಿ, ಕೆಪಿಎಸ್ಸಿ ಸಂಬಂಧಿತ ವಿಷಯಗಳು, ಕಾವೇರಿ ವಿವಾದ ಹಾಗೂ ಕಸ್ತೂರಿರಂಗನ್ ವರದಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕಿತ್ತು ಎಂದು ಅವರು ಹೇಳಿದರು. ಆದರೆ ವಿರೋಧ ಪಕ್ಷಗಳು ವಾಲ್ಮೀಕಿ ನಿಗಮದ ವಿಚಾರವನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ಅವರು ಆರೋಪಿಸಿದರು. Also Read B Nagendra: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ತಮ್ಮ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಕುತಂತ್ರದ ರಾಜಕಾರಣ ಎಂದು ಬಣ್ಣಿಸಿದ ನಾಗೇಂದ್ರ, ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ತಾವು ಯಾವುದೇ ಅಕ್ರಮದಲ್ಲಿ ಭಾಗಿಯಾಗಿದ್ದೇವೆ ಎಂಬುದಕ್ಕೆ ಸಾಕ್ಷಿ ನೀಡಬೇಕು ಎಂದು ಪ್ರಶ್ನಿಸಿದ ಅವರು, ಹಗರಣದ ಹಣ ತಮಗೆ ಬಂದಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದರು. ಶಾಸಕ ಸ್ಥಾನಕ್ಕೂ ರಾಜೀನಾಮೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಸ್‌ಐಟಿ ಹಾಗೂ ಸಿಐಡಿ ತನಿಖೆ ನಡೆಸಿವೆ ಎಂದು ನಾಗೇಂದ್ರ ಹೇಳಿದರು. ತನಿಖೆಗೆ ತಾವು ಗೌರವದಿಂದ ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದ ಅವರು, ಪ್ರಕರಣದ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ತಾವು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿದ್ದು, ಕಾನೂನು ಪ್ರಕ್ರಿಯೆಗೆ ಗೌರವ ನೀಡುತ್ತೇವೆ ಎಂದು ಹೇಳಿದರು. ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಜನತಾ ನ್ಯಾಯಾಲಯಕ್ಕೆ ಬಂದು ಎಲ್ಲವನ್ನೂ ಎದುರಿಸಿ ಎಂದು ಬಿಜೆಪಿಗರಿಗೆ ಬಹಿರಂಗ ಸವಾಲು ಕೂಡ ಹಾಕಿದ್ದಾರೆ. Recommended For You DK Shivakumar: ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೇಳುವುದರಲ್ಲಿ ತಪ್ಪಿಲ್ಲ: ಸಿಎಂ ಡಿ ಕೆ ಶಿವಕುಮಾರ್ ವಿರೋಧ ಪಕ್ಷದವರಿಂದ ಕುತಂತ್ರ ರಾಜಕಾರಣ ನಡೆಯುತ್ತಿದೆ. ಸದನದಲ್ಲಿ ಹಲವು ಬಾರಿ ಮನವಿ ಮಾಡಿಕೊಂಡೆವು, ನೋಟಿಸ್ ಕೊಡಿ. ಚರ್ಚೆಗೆ ಬನ್ನಿ ಎಂದು ಕೇಳಿಕೊಂಡೆವು, ಆದರೂ ಅವರು ಚರ್ಚೆಗೆ ಬರಲಿಲ್ಲ. ಈಗ ಇಶ್ಯೂಲೆಸ್ ಇಶ್ಯೂ ಇಟ್ಟುಕೊಂಡು ಪಾದಯಾತ್ರೆಗೆ ಹೊರಟಿದ್ದಾರೆ. ಬಿಜೆಪಿಯವರು ಮನುಸ್ಮೃತಿಯ ವಾದ ಮಾಡುತ್ತಿದ್ದು, ಸಂವಿಧಾನ ನಮಗೆಲ್ಲಾ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆ ಇದೆ. ಬಿಜೆಪಿಯವರಿಗೆ ಸವಾಲು ಬಳ್ಳಾರಿಯಲ್ಲಿ ಸೋ ಕಾಲ್ಡ್ ಲೀಡರ್‌ಗಳಿದ್ದೀರಲ್ಲ ಬನ್ನಿ ಅಖಾಡಕ್ಕೆ ಎಂದು ಹೇಳುವ ಮೂಲಕ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಸವಾಲು ಹಾಕುತ್ತೇನೆ, ತಾಕತ್ತಿದ್ದರೆ ನಮ್ಮ ಪಕ್ಷವನ್ನು ಎದುರಿಸಿ. ಇಡಿ, ಸಿಬಿಐ ಬಿಟ್ಟು ಕೇಸ್ ಹಾಕಿಸ್ತಾರೆ, ನಿಮ್ಮ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ. ರೆಡ್ಡಿ, ರಾಮುಲು ಬರಲಿ, ಜನತಾ ನ್ಯಾಯಾಲಯಕ್ಕೆ ಹೋಗೋಣ. ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು, ಚಲಾವಣೆ ಇಲ್ಲದ ನಾಣ್ಯಗಳು ಎಂದವರು ವಾಗ್ದಾಳಿ ನಡೆಸಿದ್ದಾರೆ. ಬಿ ನಾಗೇಂದ್ರ ಒಂದೇ ಪ್ರಕರಣದಲ್ಲಿ ಎರಡನೇ ಬಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಾಗೇಂದ್ರ ಅವರು 2024ರಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ 2026ರ ಆಗಸ್ಟ್‌ನಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಅವರ ನೇಮಕಾತಿಯನ್ನು ವಿರೋಧ ಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೋರಾಟ ನಡೆಸಿದ್ದವು. ಈ ಬೆಳವಣಿಗೆಗಳ ನಡುವೆ ನಾಗೇಂದ್ರ ಅವರು ಮತ್ತೊಮ್ಮೆ ರಾಜೀನಾಮೆ ಘೋಷಿಸಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion