40 ಕಿ.ಮೀ ಬೆನ್ನಟ್ಟಿ ಆರೋಪಿಗಳ ಸೆರೆ; ಪೊಲೀಸರ ಕಾರ್ಯಕ್ಕೆ ಶ್ಲಾಘನೆ
ಯಾದಗಿರಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಅಂತಾರಾಜ್ಯ ದನಗಳ್ಳರ ಗ್ಯಾಂಗ್ನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ದನಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಆರೋಪಿಗಳ ವಾಹನವನ್ನು ಪತ್ತೆಹಚ್ಚಿದ ಪೊಲೀಸರು ಸುಮಾರು 40 ಕಿ.ಮೀ. ದೂರದವರೆಗೆ ಬೆನ್ನಟ್ಟಿ ಕೊನೆಗೂ ಗ್ಯಾಂಗ್ನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದು, ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.














Comments