• Sep 11, 2026
  • NPN Log
    2026-27ನೇ ಸಾಲಿನ ಗೇಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.​ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 ಹುದ್ದೆಗಳಿಗೆ (ಉಳಿಕೆ ಮೂಲ ವೃಂದ 297 + ಹೈದ್ರಾಬಾದ್-ಕರ್ನಾಟಕ ವೃಂದ 22) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ 31-07-2026ರಂದು ಅಧಿಸೂಚನೆ ಹೊರಡಿಸಿತ್ತು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 1 ರಿಂದ ಆಗಸ್ಟ್ 31, 2026 ರವರೆಗೆ ಕಾಲಾವಕಾಶ ನೀಡಲಾಗಿತ್ತು.​ಆದರೆ, ಇತ್ತೀಚೆಗೆ ನಾಡಕಛೇರಿ ಹಾಗೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಾಂತ್ರಿಕ ಸರ್ವರ್ ಸಮಸ್ಯೆಗಳು ಎದುರಾಗಿದ್ದರಿಂದ ಜಾತಿ, ಆದಾಯ ಹಾಗೂ ಒಳ ಮೀಸಲಾತಿ ಪ್ರಮಾಣ ಪತ್ರಗಳನ್ನು ಸಮಯಕ್ಕೆ ಸರಿಯಾಗಿ ಪಡೆಯಲು ಅಭ್ಯರ್ಥಿಗಳಿಗೆ ಸಾಧ್ಯವಾಗಿರಲಿಲ್ಲ. ಜೊತೆಗೆ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇಂಟರ್‌ನೆಟ್ ಸಂಪರ್ಕದ ಕೊರತೆಯಿಂದಾಗಿ ಶುಲ್ಕ ಪಾವತಿಯಲ್ಲಿ ವೈಫಲ್ಯ ಉಂಟಾಗಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಅನೇಕ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದೆ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು.​ಅಭ್ಯರ್ಥಿಗಳಿಂದ ಬಂದ ಮನವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಲೋಕಸೇವಾ ಆಯೋಗವು, ಅಭ್ಯರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 07-09-2026ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Also Read KPSC Exam Scam: ಹಗರಣದಲ್ಲಿ ಸಚಿವರ ಹೆಸರು? ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್‌ ಸ್ಫೋಟಕ ಆರೋಪ ಜಾನುವಾರುಗಳಿಗೆ ಲಸಿಕೆ ಲಭ್ಯತೆಯ ಬಗ್ಗೆ ಪರಿಶೀಲಿಸಿ ; ಮೇವು ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ಇನ್ನು ಕರ್ನಾಟಕದಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ ಗ್ರಾಮ - ನಗರ ಪ್ರದೇಶಗಳಲ್ಲಿ ಯಾರೊಬ್ಬರಿಗೂ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ.ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೀರಿನ ಕೊರತೆ ಹೆಚ್ಚಾಗುವ ಸಂದರ್ಭಗಳಲ್ಲಿ ಜನರು ನೀರನ್ನು ಶೇಖರಿಸಿಟ್ಟುಕೊಳ್ಳುತ್ತಾರೆ. ಇದರಿಂದ ಡೆಂಗ್ಯೂ, ಚಿಕೂನ್‌ ಗುನ್ಯಾ ರೀತಿಯ ಸಾಂಕ್ರಾಮಿಕಗಳು ಹರಡಬಹುದು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು. ನಿಯಮಿತವಾಗಿ ಟಾಸ್ಕ್‌ ಫೋರ್ಸ್‌, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು ಎಂದು ನಿರ್ದೇಶಿಸಿದ್ದಾರೆ. ಸಾಮಾನ್ಯವಾಗಿ ಬರಗಾಲದ ವರ್ಷಗಳಲ್ಲಿ ಕಲುಷಿತ ನೀರು ಕುಡಿದು ಸಮಸ್ಯೆಗೆ ಸಿಲುಕಿಕೊಳ್ಳುವವರ ಪ್ರಮಾಣ ಹೆಚ್ಚಿರುತ್ತದೆ. ಈ ಕುರಿತು ನೀವುಗಳು ಹೆಚ್ಚಿನ ನಿಗಾವಹಿಸಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಎಲ್‌ ನಿನೊ ಇರುವ ವರ್ಷಗಳಲ್ಲಿ ಸಾಮಾನ್ಯವಾಗಿ ಬಿಟ್ಟು ಬಿಟ್ಟು ಮಳೆ ಬರುವುದರಿಂದ ಹಠಾತ್‌ ಪ್ರವಾಹಗಳು, ಸಿಡಿಲುಗಳು ಬರುವ ಸಂಭವಗಳು ಹೆಚ್ಚಿರುತ್ತವೆ. ಹವಾಮಾನ ಸೂಚನೆಗಳನ್ನು ಆಧರಿಸಿ ಕ್ರಮವಹಿಸಬೇಕು. ಬಿತ್ತನೆ ಬೀಜ ಕೊರತೆ ಆಗಬಾರದು. ಬೀಜ ಬಿತ್ತನೆ ಮಾಡಿದ ಮೇಲೆ ಮಳೆ ಇಲ್ಲವಾಗಿ ಮತ್ತೆ ಮಳೆ ಬಂದರೆ ಮತ್ತೆ ಬೀಜ-ಗೊಬ್ಬರಕ್ಕೆ ಬೇಡಿಕೆ ಬರಬಹುದು. ಅದಕ್ಕೆ ಸಿದ್ಧರಾಗಿ. ಬೆಳೆ ಒಣಗಿ ಮತ್ತೆ ಮಳೆ ಬಿದ್ದಾಗ ಏಕಾಏಕಿ ಬಿತ್ತನೆ ಬೀಜ, ಗೊಬ್ಬರಗಳಿಗೆ ಬೇಡಿಕೆ ಹೆಚ್ಚಬಹುದು. ರೈತರ ಒತ್ತಡ ಹೆಚ್ಚಾಗಲೂಬಹುದು ಅದನ್ನು ನಿರ್ವಹಿಸಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು. Recommended For You ಕರ್ನಾಟಕ ಬರ ಘೋಷಣೆ: 102 ತಾಲ್ಲೂಕುಗಳ ವರದಿ ಸಿದ್ಧ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಜಿ. ಪರಮೇಶ್ವರ್ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು. ನಿಮ್ಮ ವರದಿಗಳ ಪ್ರಕಾರ ಜಾನುವಾರುಗಳಿಗೆ ಮೇವಿನ ಸಂಗ್ರಹ ಕಡಿಮೆ ಇದೆ. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳು ನಿಮ್ಮ ತಂಡದ ಮೂಲಕ ಪರಿಶೀಲನೆ ಮಾಡಿಸಿ ಖಚಿತ ಪಡಿಸಿಕೊಳ್ಳಿ. ಕೊಳವೆ ಬಾವಿ ಸೇರಿದಂತೆ ಯಾರ್ಯಾರಲ್ಲಿ ನೀರಿನ ಮೂಲಗಳಿವೆಯೊ ಅವರು ಮೇವು ಬೆಳೆಯುವಂತೆ ಪ್ರೋತ್ಸಾಹ ನೀಡಿ. ಮೇವಿನ ಬೀಜಗಳ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಹೇಳಿದರು. ಯಾವ ಜನವಸತಿ ಪ್ರದೇಶಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಾಗ ನೀರಿನ ಸಂಗ್ರಹಣೆಗಳು ಹೆಚ್ಚು ಕಾಲ ಇರುವಂತಾದರೆ ಡೆಂಗ್ಯೂನಂತಹ ಕಾಯಿಲೆಗಳು ತೀವ್ರಗೊಳ್ಳಬಹುದು. ಅದರ ಕುರಿತು ಮುನ್ನೆಚ್ಚರಿಕೆ ವಹಿಸಿ. ರೈತರಿಗೆ ಕಡಿಮೆ ಮಳೆ ನೀರಿನಲ್ಲಿ ಬೆಳೆಯುವ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವಂತೆ ತಿಳಿಸಿದರು. ನಿಮ್ಮ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ತುರ್ತು ಅಗತ್ಯಗಳಿಗಾಗಿ 5 ಕೋಟಿ ರೂ. ಗಳನ್ನು ಒದಗಿಸಿದ್ದೇವೆ. ಅದನ್ನು ಬಳಕೆ ಮಾಡಿ. ಕುಡಿಯುವ ನೀರಿಗೆ ಜಲಾಶಯಗಳ ನೀರನ್ನು ಬಳಸಿ. ಕೊಳವೆ ಬಾವಿಗಳಲ್ಲಿ ಖಾಲಿಯಾದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ತೆಗೆದುಕೊಳ್ಳಿ. ನಂತರವೂ ಸಮಸ್ಯೆಗಳಿದ್ದರೆ ಕೊಳವೆ ಬಾವಿಗಳನ್ನು ಡೀಪನಿಂಗ್‌ ಮಾಡಿ. ಕಡೆಯ ಆದ್ಯತೆ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು. ಈ ನಡುವೆ ತುರ್ತು ಅಗತ್ಯಗಳಿದ್ದರೆ ಟ್ಯಾಂಕರ್‌ ಬಳಸಿ ಎಂದಿದ್ದು, ರಾಜ್ಯದ ಪ್ರತಿ ತಾಲ್ಲೂಕಿಗೂ ಒಬ್ಬೊಬ್ಬರಂತೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಇವರನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಮುಖ್ಯ ಕಾರ್ಯದರ್ಶಿಯವರು ಈ ಕುರಿತು ಗಮನ ಹರಿಸಬೇಕು ಎಂದರು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion