• Feb 03, 2026
  • NPN Log
    U19 World Cup 2026, India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ದೂರದ ಝಿಂಬಾಬ್ವೆಯಲ್ಲಿ. ಅಂದರೆ ಅಂಡರ್-19 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ. ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಅದರಂತೆ ಫೆಬ್ರವರಿ 1 ರಂದು ನಡೆಯಲಿರುವ ಸೂಪರ್-6 ಹಂತದ 12ನೇ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಝಿಂಬಾಬ್ವೆಯ ಕ್ವೀನ್ಸ್ ಸ್ಪೋರ್ಟ್ಸ್​ ಕ್ಲಬ್ ಮೈದಾನ ಆತಿಥ್ಯವಹಿಸಲಿದೆ. ಈ ಬಾರಿಯ ಅಂಡರ್-19 ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ಭಾರತ ತಂಡವು ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು 18 ರನ್​ಗಳಿಂದ ಮಣಿಸಿದ್ದರು. ಹಾಗೆಯೇ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡಕ್ಕೆ 7 ವಿಕೆಟ್​ಗಳ ಸೋಲುಣಿಸಿದ್ದರು. ಈ ಮೂಲಕ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿ ಟೀಮ್ ಇಂಡಿಯಾ ಸೂಪರ್-6 ಹಂತಕ್ಕೇರಿದ್ದರು. ಮತ್ತೊಂದೆಡೆ ಗ್ರೂಪ್-ಸಿ ನಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ್ ತಂಡವು ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 37 ರನ್​ಗಳ ಸೋಲನುಭವಿಸಿದ್ದರು. ಈ ಸೋಲಿನ ಹೊರತಾಗಿಯೂ ಪಾಕ್ ಪಡೆ ಸ್ಕಾಟ್ಲೆಂಡ್ ಹಾಗೂ ಝಿಂಬಾಬ್ವೆ ವಿರುದ್ಧ ಜಯಗಳಿಸಿ 4 ಅಂಕಗಳೊಂದಿಗೆ ಸೂಪರ್-6 ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೂಪರ್-6 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್-2 ನಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಂತೆ ಉಭಯ ತಂಡಗಳು ಫೆಬ್ರವರಿ 1 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಏಷ್ಯಾಕಪ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ. 2025ರ ಅಂಡರ್-19 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಪಾಕಿಸ್ತಾನ್ ತಂಡ ಯಶಸ್ವಿಯಾಗಿತ್ತು. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವು 50 ಓವರ್​ಗಳಲ್ಲಿ 347 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾ ಗಳಿಸಿದ್ದು ಕೇವಲ 156 ರನ್​ಗಳು ಮಾತ್ರ. ಈ ಮೂಲಕ 191 ರನ್​ಗಳ ಅಂತರದಿಂದ ಸೋತು ಭಾರತ ತಂಡವು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಸೋಲು-ಗೆಲುವಿನ ಬಳಿಕ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲು ಮುಂದಾಗಿದೆ. ಅದರಂತೆ ಈ ಬಾರಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಡರ್-19 ಏಷ್ಯಾಕಪ್ ಫೈನಲ್​ ಸೋಲಿನ ಲೆಕ್ಕವನ್ನು ಚುಕ್ತ ಮಾಡಲಿದೆಯಾ ಕಾದು ನೋಡಬೇಕಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion