• Sep 11, 2026
  • NPN Log
    ರಾಜ್ಯದ ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಮಾಡಬೇಕು. ಹಾಗಾಗಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಆಗ ಈ ವರ್ಗಕ್ಕೆ ಸೇರುವ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. Parameshwara:ಕೇಂದ್ರಕ್ಕೆ ಸಮಗ್ರ ಬರ ವರದಿ ಇಂದು ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬರ ವೀಕ್ಷಣೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ್‌, ಇನ್ನೆರಡು ವಾರದೊಳಗೆ ಕೇಂದ್ರಕ್ಕೆ ಸಮಗ್ರ ಬರ ವರದಿಯನ್ನು ಸಲ್ಲಿಸುತ್ತೇವೆ. ಆ ಬಳಿಕ ಕೇಂದ್ರದ ತಂಡಗಳು ಬಂದು ಪರಿಶೀಲನೆ ನಡೆಸಿ, ನಂತರವಷ್ಟೇ ಪರಿಹಾರ ಬಿಡುಗಡೆಯಾಗುತ್ತದೆ. ಅದರ ಮೊದಲು ನಮಗೆ ಯಾವುದೇ ಪರಿಹಾರ ಹಣವನ್ನು ನಮಗೆ ಕೊಡುವುದಿಲ್ಲ ಎಂದರು. ಮುಖ್ಯಮಂತ್ರಿಗಳು ಇಂದು ಗದಗದಲ್ಲಿ ಬರವೀಕ್ಷಣೆ ಮಾಡುತ್ತಿದ್ದಾರೆ. ನಾನು ಇಲ್ಲಿ ವೀಕ್ಷಣೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಆದೇಶದಂತೆ ಎಲ್ಲ ಸಚಿವರು ತಮಗೆ ನಿಯೋಜಿಸಿರುವ ಜಿಲ್ಲೆಗಳ ಬರ ವೀಕ್ಷಣೆ ನಡೆಸುತ್ತಿದ್ದಾರೆ. ಆನಂತರ ಎಲ್ಲವನ್ನೂ ಒಟ್ಟಾಗಿ ಪರಿಶೀಲಿಸಿ, ರೈತರಿಗೆ ಯಾವ ರೀತಿಯಲ್ಲಿ ಸಹಾಯ ಮಾಡಬೇಕು, ಇನ್ಶೂರೆನ್ಸ್ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. Also Read Drought Relief: ಬರ ಪರಿಹಾರಕ್ಕೆ ಕೇಂದ್ರಕ್ಕೆ ವರದಿ:10 ದಿನದೊಳಗೆ ರೈತರ ಖಾತೆಗೆ ಹಣ:ಪರಮೇಶ್ವರ್‌ ಜೋಳಕ್ಕೆ ಬಿಳಿಸುಳಿ ರೋಗ ಬಂದಿದೆ. ಆ ರೋಗ ಇನ್ಶೂರೆನ್ಸ್‌ನಲ್ಲಿ ಕವರ್ ಆಗಲ್ಲ. ಹಾಗಾಗಿ ಇನ್ಶೂರೆನ್ಸ್ ಕಂಪನಿಯವರೊಂದಿಗೆ ಮಾತನಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಯತ್ನ ಮಾಡಬೇಕು. ಇದನೆಲ್ಲ ತಿಳಿದುಕೊಳ್ಳಲೆಂದೇ ಇಂದು ನಾನು ಬರವೀಕ್ಷಣೆಗೆ ಬಂದಿರುವುದಾಗಿ ಉಪ ಮುಖ್ಯಮಂತ್ರಿಗಳು ತಿಳಿಸಿದರು. ಅಂತಾರಾಷ್ಟ್ರೀಯ ಹವಾಮಾನ ವರದಿಯ ಪ್ರಕಾರ, ಸೆಪ್ಟೆಂಬರ್ ನಲ್ಲಿ ಒಂದನೇ ವಾರ ಅಥವಾ ಎರಡನೇ ವಾರದಲ್ಲಿ ಮಳೆ ಕಂಪ್ಲೀಟ್ ಆಗಿ ನಿಂತು ಹೋಗುತ್ತದೆ ಎಂಬ ಮಾಹಿತಿ ಇದೆ. ಎಲ್ ನಿನೋದಿಂದಾಗಿ 123 ವರ್ಷಗಳ ಬಳಿಕ ಈ ಪರಿಸ್ಥಿತಿ ಇದೆ. ಮಳೆ ಬರುತ್ತದೆ ಎಂದು ಹೇಳಲು ಆಗವುದಿಲ್ಲ. ಹೀಗಾಗಿ ರೈತರಿಗೆ ಮುಂದೆ ಯಾವ ರೀತಿ ಸಹಾಯ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದರು. Recommended For You ಗುಡ್‌ನ್ಯೂಸ್: ಕರ್ನಾಟಕದಲ್ಲಿ ಭೀಕರ ಬರ! ₹635 ಕೋಟಿ ಖರ್ಚು; 101 ತಾಲೂಕುಗಳು ಬರಪೀಡಿತ ಘೋಷಣೆಗೆ ಸಜ್ಜು Parameshwara:ಮೋಡ ಬಿತ್ತನೆ ಮಾಡಲು ಆದೇಶ ಮೋಡ ಬಿತ್ತನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೋಡ ಬಿತ್ತನೆ ಮಾಡಲು ಆದೇಶ ಕೊಟ್ಟಿದ್ದಾರೆ. ಈ ಬಗ್ಗೆ ನಮ್ಮ ಟೆಕ್ನಿಕಲ್ ತಂಡದವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಎಷ್ಟರ ಮಟ್ಟಿಗೆ ಸಹಾಯ ಆಗುತ್ತದೆ ಎಂಬುದನ್ನು ನೋಡಬೇಕು. ಟೆಕ್ನಿಕಲ್ ವರದಿಯ ಪ್ರಕಾರ ಹೆಚ್ಚು ಮಳೆ ಬರುವುದಿಲ್ಲ. ಅದು ತುಂತುರು ಮಳೆ ಬಂದ ಹಾಗೆ ಬರುತ್ತದೆ. ಜೊತೆಗೆ ಅದು ಬೆಳೆಗಳಿಗೆ ಸಾಕಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಇದನ್ನು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದರು. ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ತಂಬಾಕು ಸಸ್ಯ ಬೆಳೆಯುತ್ತಾರೆ. ಆದರೆ ಈ ಬಾರಿ ಹುಣಸೂರು ತಾಲ್ಲೂಕಿನಲ್ಲೇ 16 ಸಾವಿರಕ್ಕೂ ಹೆಚ್ಚು ಹೇಕ್ಟರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ಆದರೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ, ವಾಣಿಜ್ಯ ಬೆಳೆಗಳಿಗೆ ಪರಿಹಾರ ಇಲ್ಲ. ಹೀಗಾಗಿ ಇದಕ್ಕೆ ರಾಜ್ಯ ಸರ್ಕಾರದ ಪರಿಹಾರವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇಂದು ನಾನು ಬರವೀಕ್ಷಣೆ ಮಾಡಿದ ಬಳಿಕ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಸಂಪುಟದಲ್ಲಿ ಚರ್ಚೆ ಮಾಡಿ ರೈತರಿಗೆ ಏನು ಸಹಾಯ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಒಂದು ತಾಲ್ಲೂಕಿನಲ್ಲಿ 16 ಸಾವಿರ ಹೆಕ್ಟೇರ್‌ ನಷ್ಟ ಆಗಿದೆ ಎಂದರೆ, ಪಕ್ಕದ 6 ತಾಲ್ಲೂಕುಗಳಲ್ಲಿಯೂ ಇದುವೇ ಪರಿಸ್ಥಿತಿ ಇದೆ. ಹೀಗಾಗಿ ಈ ಕುರಿತು ಚರ್ಚೆ ಮಾಡುತ್ತೇವೆ ಎಂದರು. You May Also Like ಕರ್ನಾಟಕ ಬರ ಘೋಷಣೆ: 102 ತಾಲ್ಲೂಕುಗಳ ವರದಿ ಸಿದ್ಧ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಜಿ. ಪರಮೇಶ್ವರ್ ಹುಣಸೂರು ತಾಲ್ಲೂಕಿನ ಕಂದಾಯ ಇಲಾಖೆಯ ಕಟ್ಟಡಗಳು ಸೋರುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಕುರಿತು ಪ್ರಸ್ತಾವನೆ ಬಂದಿದ್ದರೆ ಅದನ್ನು ಪರಿಶೀಲನೆ ಮಾಡಿ ಮುಂದೆ ನೂತನ ಕಟ್ಟಡವನ್ನು ನಿರ್ಮಿಸಲು ತೀರ್ಮಾನ ಮಾಡುತ್ತೇವೆ ಎಂದರು. ಈ ವೇಳೆ ಹುಣಸೂರು ಶಾಸಕ ಹರೀಶ್‌ಗೌಡ, ಕೆ.ಆರ್.ನಗರ ಶಾಸಕ ರವಿಶಂಕರ್, ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ತಹಶೀಲ್ದಾರ್ ಮತ್ತು ಕೃಷಿ ಅಧಿಕಾರಿಗಳು ಇದ್ದರು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion