ಬಂಗಾಳ ಕೊಲ್ಲಿಯಲ್ಲಿ ಪನಾಮಾ ಧ್ವಜದ ಸರಕು ಹಡಗು ಮುಳುಗಡೆ
ಒಡಿಶಾದ ಪಾರಾದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲಿ ದೂರದ ಬಂಗಾಳ ಕೊಲ್ಲಿಯಲ್ಲಿ ಸಿಂಗಾಪುರಕ್ಕೆ ತೆರಳುತ್ತಿದ್ದ ಪನಾಮಾ ಧ್ವಜದ ಸರಕು ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿ 24 ಮಂದಿ ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ. ಮಾಹಿತಿ ಲಭ್ಯವಾದ ತಕ್ಷಣ ಭಾರತೀಯ ಕರಾವಳಿ ಪಡೆ ಮತ್ತು ನೌಕಾಪಡೆ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಕೊನೆಯ ಲೊಕೇಶನ್ ಸಿಕ್ಕ ಪ್ರದೇಶದ ಸುತ್ತಮುತ್ತ ಸಂಚರಿಸುತ್ತಿದ್ದ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಸಿಬ್ಬಂದಿ ಪತ್ತೆ ಮತ್ತು ರಕ್ಷಣೆಗೆ ಸಹಕರಿಸುವಂತೆ ಸೂಚಿಸಲಾಗಿದೆ. ಹಡಗು ಮುಳುಗಲು ಕಾರಣ ಇನ್ನೂ ತಿಳಿದುಬಂದಿಲ್ಲ.














Comments