‘ಭೂತ ಬಿಡಿಸುವ’ ಹೆಸರಿನಲ್ಲಿ ಹಿಂಸೆ? ಸತೀಶ್ ಪಾತ್ರಿ ವಿರುದ್ಧ ದೂರು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲಿನಲ್ಲಿ ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸತೀಶ್ ಪಾತ್ರಿ ಎಂಬಾತನ ವಿರುದ್ಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸತೀಶ್ ಪಾತ್ರಿ ಮಾಧ್ಯಮಗಳ ಮುಂದೆ ಬಂದು ಆರೋಪಗಳನ್ನು ತಳ್ಳಿಹಾಕಿದ್ದಾರೆ. ಇದು ತನ್ನ ವಿರುದ್ಧ ನಡೆಯುತ್ತಿರುವ ಪಿತೂರಿ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.














Comments