• Sep 11, 2026
  • NPN Log
    ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರ ಪುತ್ರ ಮನೋರಂಜನ್ (Manoranjan Ravichandran) ಅವರು ಈಗಾಗಲೇ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದಾರೆ. ಆದರೆ ಈಗ ಅವರು ‘ಕೌಂತೇಯ’ (Kounteya) ಚಿತ್ರದಲ್ಲಿ ವಿಲನ್ ಆಗಿದ್ದಾರೆ. ‘ಕುಂಭರಾಶಿ’ ಖ್ಯಾತಿಯ ಬಿ.ಕೆ. ಚಂದ್ರಹಾಸ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಶ್ರೀ ಮಹಾಂಕಾಳಿ ಪಿಕ್ಚರ್ಸ್’ ಸಂಸ್ಥೆಯ ಮೂಲಕ ಸುರೇಶ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಕೌಂತೇಯ’ ಸಿನಿಮಾದಲ್ಲಿ ಹಿರಿಯ ನಟ ಅಚ್ಯುತ್ ಕುಮಾರ್ (Achutha Kumar) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ. ಮನೋರಂಜನ್ ರವಿಚಂದ್ರನ್ ಅವರು ಇದೇ ಮೊದಲ ಬಾರಿಗೆ ನೆಗೆಟಿವ್ ಶೇಡ್ ಇರುವ ಪಾತ್ರವನ್ನು ಮಾಡಿರುವುದರಿಂದ ‘ಕೌಂತೇಯ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ‘ಕೌಂತೇಯ’ ಎಂಬುದು ಕುಂತಿ ಪುತ್ರ ಕರ್ಣನ ಇನ್ನೊಂದು ಹೆಸರು. ಆದರೆ ಇದು ಪೌರಾಣಿಕ ಕಥೆ ಇರುವ ಸಿನಿಮಾ ಅಲ್ಲ. ಮರ್ಡರ್ ಮಿಸ್ಟ್ರಿ ಆಧಾರಿತ ಎಮೋಷನಲ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಬಿ.ಕೆ. ಚಂದ್ರಹಾಸ ಅವರು ಮಾತನಾಡಿದರು. ‘ಮನೋರಂಜನ್ ಅವರು ವಿಲನ್ ಶೇಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ತಪಾತ ಒಳ್ಳೆಯದಲ್ಲ ಎಂದು ಚಿತ್ರದ ಮೂಲಕ ಹೇಳಹೊರಟಿದ್ದೇವೆ. ಬೆಂಗಳೂರು, ಮೈಸೂರು ಸುತ್ತಮುತ್ತ 3 ಹಂತಗಳಲ್ಲಿ ಚಿತ್ರೀಕರಣ ನಡೆಸಿದ್ದೇವೆ. ನವೆಂಬರ್ ವೇಳೆಗೆ ಸಿನಿಮಾ ರಿಲೀಸ್ ಮಾಡುವ ಗುರಿ ಇದೆ’ ಎಂದು ಅವರು ಹೇಳಿದರು. ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿರುವ ಮನೋರಂಜನ್ ರವಿಚಂದ್ರನ್ ಅವರು ಮಾತನಾಡಿ, ‘ನನ್ನದು ನೆಗೆಟಿವ್ ಶೇಡ್ ಇರುವ ಪಾತ್ರ. ಇಡೀ ಸಿನಿಮಾದಲ್ಲಿ ಇರುವುದಿಲ್ಲ. ಒಂದು ಪ್ರಯೋಗ ಎಂದುಕೊಂಡು ಈ ಪಾತ್ರವನ್ನು ಮಾಡಿದ್ದೇನೆ. ನಾನು ಈ ಹಿಂದೆ ಮಾಡಿದ ಎಲ್ಲ ಪಾತ್ರಗಳಿಗಿಂತ ಇದು ವಿಭಿನ್ನವಾಗಿದೆ’ ಎಂದರು. ರಾಘವೇಂದ್ರ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಪಿ.ಎಲ್. ರವಿ ಅವರ ಛಾಯಾಗ್ರಹಣ, ಅನುರಂಜನ್ ಅವರ ಸಂಕಲನ ಈ ಸಿನಿಮಾಗಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion