ಹಿಂದೂ ದೌರ್ಜನ್ಯ ಖಂಡನೆ: ಬಾಂಗ್ಲಾ ಕ್ರಿಕೆಟ್ ಬೋರ್ಡ್ ಐಸಿಸಿಗೆ ಮನವಿ
T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ್ಲಿ ಆಡಬೇಕಿದೆ. ಆದರೆ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಪಂದ್ಯವನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ಗೆ ಐಸಿಸಿಗೆ ಮನವಿ ಮಾಡಿದೆ.
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ್ ತಂಡ ಭಾಗವಹಿಸಲಿದೆಯಾ? ಈ ಪ್ರಶ್ನೆಗೆ ಜನವರಿ 21 ರಂದು ಸ್ಪಷ್ಟ ಉತ್ತರ ಸಿಗಲಿದೆ. ಏಕೆಂದರೆ ವಿಶ್ವಕಪ್‌ನಲ್ಲಿ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ಗೆ ಐಸಿಸಿ ಗಡುವು ನೀಡಿದೆ.
ಜನವರಿ 17 ರಂದು ಢಾಕಾದಲ್ಲಿ ನಡೆದ ಸಭೆಯಲ್ಲಿ ಐಸಿಸಿ ಈ ಹೊಸ ಗಡುವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದೆ. ಟಿ20 ವಿಶ್ವಕಪ್‌ನಲ್ಲಿ ಆಡಬೇಕೆ ಬೇಡವೇ ಎಂಬುದನ್ನು ಮಾತ್ರವಲ್ಲದೆ, ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲು ಬಾಂಗ್ಲಾದೇಶಕ್ಕೆ ಜನವರಿ 21 ರವರೆಗೆ ಸಮಯಾವಕಾಶ ನೀಡಲಾಗಿದೆ.
ಪಂದ್ಯಗಳ ಸ್ಥಳಾಂತರವಿಲ್ಲ:
ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಭಾರತದಲ್ಲಿ ಪಂದ್ಯವಾಡಲು ಹಿಂದೇಟು ಹಾಕುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಲು ಬಿಸಿಬಿ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಿಸಲಾಗುವುದಿಲ್ಲ ಎಂದು ಐಸಿಸಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ಗೆ ತಿಳಿಸಿದೆ.
ಹಿಂದೇಟು ಹಾಕಲು ಕಾರಣವೇನು?
ಕೆಲ ದಿನಗಳ ಹಿಂದೆಯಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡಲಾಗಿತ್ತು. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ನಲ್ಲಿ ಹಿಂದೂಗಳ ಮೇಲಿನ ನಡೆಯುತ್ತಿರುವ ದೌರ್ಜನ್ಯ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಹತ್ಯೆಯನ್ನು ಖಂಡಿಸಿ ಇತ್ತೀಚೆಗೆ ಭಾರತದಲ್ಲಿ ಪ್ರತಿಭಟನೆಗಳು ನಡೆದಿದ್ದವು.














Comments